ಮಡಿಕೇರಿ, ಜ. ೧೮: ಜಿಲ್ಲೆಯಲ್ಲಿ ತಾ. ೧೮ ರಂದು ಹೊಸದಾಗಿ ೬ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೫,೯೦೨ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೩೫ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೭೯೧ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೬೩ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೧೨ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೫೧ ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾ ದ್ಯಂತ ೩೭ ನಿಯಂತ್ರಿತ ವಲಯಗಳಿವೆ.

ಜಿಲ್ಲೆಯಲ್ಲಿ ಒಟ್ಟು ೪೨೦೮ ಶಿಕ್ಷಕರಿಗೆ, ೭೨೯೭ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.