ಹಣದೊಂದಿಗೆ ಸಿಕ್ಕಿಬಿದ್ದ ಚೆನ್ನೆöÊ ಕಸ್ಟಮ್ಸ್ ಅಧಿಕಾರಿ ದಂಪತಿ
ಬೆAಗಳೂರು, ಜ. ೧೯: ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಚೆನ್ನೆöÊ ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿಯಿಂದ ಬರೋಬ್ಬರಿ ೭೫ ಲಕ್ಷ ರೂಪಾಯಿ ನಗದು, ಚಿನ್ನಾಭರಣವನ್ನು ಸಿಐಎಸ್‌ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಚೆನ್ನೆöÊನ ಕಸ್ಟಮ್ಸ್ ಅಧಿಕಾರಿ ಮೊಹಮ್ಮದ್ ಇರ್ಫಾನ್ ಅಹ್ಮದ್ ಹಾಗೂ ಅವರ ಪತ್ನಿ ಬಳಿ ತಪಾಸಣೆ ನಡೆಸಿದ್ದು ಈ ವೇಳೆ ನಗದು ಪತ್ತೆಯಾಗಿದೆ. ಸಿಐಎಸ್‌ಎಫ್ ಅಧಿಕಾರಿಗಳು ದಂಪತಿಯಿAದ ಎರಡು ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್, ಚಿನ್ನಾಭರಣ, ೭೪ ಲಕ್ಷದ ೮೧ ಸಾವಿರ ನಗದನ್ನು ಜಪ್ತಿ ಮಾಡಿದ್ದು ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಚೆನ್ನೆöÊನಲ್ಲಿರುವ ಇರ್ಫಾನ್ ಅಹ್ಮದ್ ಬೆಂಗಳೂರು ಮೂಲಕ ಉತ್ತರಪ್ರದೇಶದ ಲಖನೌಗೆ ಪ್ರಯಾಣಿಸುತ್ತಿದ್ದರು.
೩ ವರ್ಷದ ಮಗುವಿಗೆ ಚೂರಿ ಇರಿದ ವ್ಯಕ್ತಿ
ಬೆಂಗಳೂರು, ಜ. ೧೯: ಆಸ್ತಿ ವಿವಾದದಲ್ಲಿ ವ್ಯಕ್ತಿಯೋರ್ವ ತನ್ನ ತಾಯಿ, ತಮ್ಮನ ಪತ್ನಿ ಹಾಗೂ ೩ ವರ್ಷದ ಮಗುವಿಗೆ ಚೂರಿ ಇರಿದ ಘಟನೆ ಮಡಿವಾಳದಲ್ಲಿ ನಡೆದಿದೆ. ಮಡಿವಾಳದ ಡಾಲರ್ಸ್ ಕಾಲೋನಿಯ ನಿವಾಸಿ ಗೋಪಾಲಕೃಷ್ಣ (೩೬) ಕ್ಯಾಬ್ ಡ್ರೈವರ್ ಸೂಪರ್ ಮಾರ್ಕೆಟ್‌ನಿಂದ ಚೂರಿಯನ್ನು ಖರೀದಿಸುತ್ತಿದ್ದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಬೆಳಿಗ್ಗೆ ೮:೩೦ ಕ್ಕೆ ಈ ಘಟನೆ ನಡೆದಿದ್ದು, ಆಸ್ತಿ ಮಾರಾಟ ಮಾಡುವ ಸಂಬAಧ ಗೋಪಾಲಕೃಷ್ಣ ತನ್ನ ತಾಯಿಯೊಂದಿಗೆ ವಾಗ್ವಾದ ನಡೆಸಿದಾಗ ಈ ಕೊಲೆ ಪ್ರಯತ್ನ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗೋಪಾಲಕೃಷ್ಣನಿಗೆ ಓರ್ವ ತಮ್ಮನಿದ್ದು, ಪಿತ್ರಾರ್ಜಿತ ಆಸ್ತಿ ಮಾರಾಟ ಮಾಡುವ ಸಂಬAಧ ತನಗೆ ಬೆಂಬಲ ನೀಡುತ್ತಿಲ್ಲ ಎಂಬ ಕಾರಣಕ್ಕಾಗಿ ತಾಯಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ತಾಯಿ ಗುಣಮ್ಮ (೬೦), ತಮ್ಮನ ಪತ್ನಿ ಗಿರಿಜ (೨೬) ಹಾಗೂ ಆಕೆಯ ೩ ವರ್ಷದ ಮಗುವಿಕೆ ಚೂರಿಯಿಂದ ಇರಿದಿದ್ದಾನೆ. ಚೂರಿಯಿಂದ ಇರಿದು, ಪರಾರಿಯಾಗುತ್ತಿದ್ದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ
ಬೆಳಗಾವಿ: ಜಿಲ್ಲೆಯ ರಾಮದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಗೊಬ್ಬರದ ವರ್ತಕರಾಗಿದ್ದ ಪ್ರವೀಣ ರಮೇಶ ಶೆಟ್ಟರ (೩೭), ಅವರ ಪತ್ನಿ ರಾಜೇಶ್ವರಿ (೩೦), ಮಕ್ಕಳಾದ ಅಮೃತಾ (೮) ಮತ್ತು ಅದ್ವಿಕ್ (೫) ಮೃತ ದುರ್ದೈವಿಗಳು ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ
ಬೆAಗಳೂರು, ಜ. ೧೯: ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಬಂದೂಕುಗಳು ಸದ್ದು ಮಾಡಿದ್ದು, ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಮೂಲಗಳ ಪ್ರಕಾರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ಪ್ರವೀಣ್ (೨೨) ಕಾಲಿಗೆ ಪೀಣ್ಯಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್‌ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್‌ನಿAದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಹೆಡ್ ಕಾನ್ಸ್ಟೇಬಲ್ ಹಾಗೂ ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ರಾಜಗೋಪಾಲನಗರ, ಪೀಣ್ಯಾ ಠಾಣೆಗಳಲ್ಲಿ ಹಲ್ಲೆ, ಡಕಾಯಿತಿ ಪ್ರಕರಣಗಳಿವೆ ಎಂದು ಹೇಳಲಾಗಿದೆ.
ಆತ್ಮಹತ್ಯೆ; ಮೊಬೈಲ್‌ನಲ್ಲಿ ದೃಶ್ಯ ಸೆರೆ
ಬೆಂಗಳೂರು, ಜ. ೧೯: ಪತ್ನಿಯೊಂದಿಗೆ ಜಗಳವಾಡಿ ಪತಿ ನೇಣಿಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಬಸವೇಶ್ವರನಗರದ ಮಂಜುನಾಥ ನಗರದಲ್ಲಿ ನಡೆದಿದೆ. ೨೮ ವರ್ಷದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನಲ್ಲಿದ್ದ ತನ್ನ ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ ಅನಿಲ್ ಕುಡಿದ ಅಮಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅನಿಲ್ ಮನೆಯ ಅಕ್ಕ ಪಕ್ಕದವರು ಕಿಟಕಿ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಅನಿಲ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದ್ದರು. ಆದರೂ, ಸಮಾಧಾನಗೊಳ್ಳದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ದೃಶ್ಯವನ್ನು ನೆರೆಮನೆಯವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಕ್ಕ ಪಕ್ಕದವರು ಬಂದು ಅನಿಲ್ ಮನೆಯ ಬಾಗಿಲು ಮುರಿದು ಒಳಹೋಗುವಷ್ಟರಲ್ಲಿ ಅನಿಲ್ ಮೃತಪಟ್ಟಿದ್ದರು ಎನ್ನಲಾಗಿದೆ. ಘಟನೆಗೆ ಸಂಬAಧಿಸಿದAತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.