ಮಡಿಕೇರಿ, ಜ.೧೯: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಜನವರಿ, ೧೮ ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ, ನಾಡ ಕಚೇರಿಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಚುರ ಪಡಿಸಲಾಗಿದೆ. ಜಿಲ್ಲೆಯ ಅಧಿಕೃತ ವೆಬ್‌ಸೈಟ್ ತಿತಿತಿ.ಞoಜಚಿgu.ಟಿiಛಿ.iಟಿ ನಲ್ಲಿಯೂ ಸಹ ಪ್ರಚುರ ಪಡಿಸಲಾಗಿದೆ.

ಮತದಾರರು ಈ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೋರಿದೆ.