ಸೋಮವಾರಪೇಟೆ, ಜ. ೧೯: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ತಾ. ೨೦ ರಂದು (ಇಂದು) ಇಲ್ಲಿನ ಪತ್ರಿಕಾ ಭವನದಲ್ಲಿ ಪೂರ್ವಾಹ್ನ ೧೦ ಗಂಟೆಗೆ ನಡೆಯಲಿದೆ.

ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಅಧ್ಯಕ್ಷೆ ಬಿ.ಆರ್. ಸವಿತ ರೈ, ವೀಕ್ಷಕರಾಗಿ ಉಪಾಧ್ಯಕ್ಷ ಪಾರ್ಥ ಚಿಣ್ಣಪ್ಪ ಭಾಗವಹಿಸಲಿದ್ದಾರೆ.

ಪ್ರಶಸ್ತಿ ಪ್ರದಾನ: ತಾಲೂಕು ಪತ್ರಕರ್ತರ ಸಂಘದ ಮೂಲಕ ದಾನಿಗಳ ನೆರವಿನೊಂದಿಗೆ ಸ್ಥಾಪಿಸಿರುವ ವಿವಿಧ ದತ್ತಿನಿಧಿಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಅಪರಾಹ್ನ ೧೨ ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ತಾಲೂಕು ತಹಶೀಲ್ದಾರ್ ಗೋವಿಂದರಾಜು ಉದ್ಘಾಟಿಸಲಿದ್ದು, ಮೋಬಿಯಸ್ ಫೌಂಡೇಷನ್‌ನ ವ್ಯವಸ್ಥಾಪಕ ಪಾಲುದಾರ ಮಧು ಬೋಪಣ್ಣ, ಉದ್ಯಮಿಗಳಾದ ಪವನ್ ದೇವಯ್ಯ, ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪತ್ರಕರ್ತರ ಸಂಘದ ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರುಳೀಧರ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಸ್. ಮಹೇಶ್ ಅವರುಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್ ತಿಳಿಸಿದ್ದಾರೆ.