ಚೆಯ್ಯಂಡಾಣೆ , ಜ. ೧೯: ಸ್ಥಳೀಯ ಪಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಅಧ್ಯಯನ ನಿರತ ವಿದ್ಯಾರ್ಥಿಗಳಿಗೆ ಕೋವಿಡ್-೧೯ ರ ವಿಷಯದ ಕುರಿತಾಗಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಕ್ರಮವಾಗಿ ಫೌಸಿಯ ಕೆ.ಯು., ಕುಶಿ ಎಂ.ಎಸ್., ಮೋಹಿತ್ ಪೂಣಚ್ಚ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನರಿಯಂದಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ್, ಸ್ಥಳೀಯ ಆರೋಗ್ಯ ಕೇಂದ್ರದ ಸಹಾಯಕಿ ಕನಕಾವತಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿಜೇತರಿಗೆ ಆರೋಗ್ಯ ಕೇಂದ್ರದ ವತಿಯಿಂದ ಬಹುಮಾನ ವಿತರಿಸಲಾಯಿತು