ಪೊನ್ನಂಪೇಟೆ, ಜ. ೧೯: ಬೆಂಗಳೂರಿನ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಪ್ರಯುಕ್ತ ನೀಡಲಾಗುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಕೊಡಗಿನಿಂದ ಉಪನ್ಯಾಸಕ ಮಂದೆಯAಡ ಎನ್. ವನಿತ್‌ಕುಮಾರ್ ಆಯ್ಕೆಯಾಗಿದ್ದಾರೆ. ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಪ್ರತಿವರ್ಷ ವಿವಿಧ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಕರ್ನಾಟಕದ ಎಲ್ಲಾ ಜಿಲ್ಲೆಯ ಆಯ್ದ ಸಾಧಕರನ್ನು ಗುರುತಿಸಿ ಈ ಸದ್ಭಾವನಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿ ಕೊಡಗು ಜಿಲ್ಲೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕ ಮತ್ತು ಎನ್.ಎಸ್.ಎಸ್.ನ ಜಿಲ್ಲಾ ಸಂಯೋಜನಾಧಿಕಾರಿ ಯಾಗಿರುವ ಎಂ.ಎನ್. ವನಿತ್‌ಕುಮಾರ್ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ ಎಂದು ರಾಜ್ಯ ಯುವ ಸಂಘಗಳ ಒಕ್ಕೂಟದ ಪರವಾಗಿ ಕನ್ನಡ ಜನಪದ ಪರಿಷತ್‌ನ ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಮತ್ತು ತಾಲೂಕು ಘಟಕದ ವತಿಯಿಂದ ತಾ. ೩೦ ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಎಸ್. ಬಾಲಾಜಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ವನಿತ್‌ಕುಮಾರ್ ಅವರು ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.