ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್‌ನಿAದ ರಾಜಭವನ ಚಲೋ
ಬೆಂಗಳೂರು, ಜ. ೨೦: ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಮೆಜೆಸ್ಟಿಕ್‌ನಿಂದ ಆರಂಭವಾದ ಕಾಂಗ್ರೆಸ್ ರ‍್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ ಪರಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮಹಾರಾಣಿ ಕಾಲೇಜ್ ಬಳಿ ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಿಎಂಟಿಸಿ ಬಸ್‌ನಲ್ಲಿ ಕರೆದುಕೊಂಡು ಹೋಗಲಾಯಿತು. ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ‍್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ, ಆನಂದರಾವ್ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.
ವೈಟ್‌ಹೌಸ್ ತೊರೆದ ಟ್ರಂಪ್-ವಿದಾಯ ಭಾಷಣ
ವಾಷಿಂಗ್ಟನ್, ಜ. ೨೦: ಅಮೇರಿಕಾದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೈಟ್‌ಹೌಸ್ ತೊರೆದು ಮೇರಿಲ್ಯಾಂಡ್‌ಗೆ ತೆರಳಿದರು. ಮೇರಿಲ್ಯಾಂಡ್‌ನಲ್ಲಿ ವಿದಾಯದ ಭಾಷಣ ಮಾಡಿದ ಡೊನಾಲ್ಡ್ ಟ್ರಂಪ್, ಮುಂದಿನ ಸರ್ಕಾರಕ್ಕೆ ಶುಭಕೋರಿ, ಅಮೇರಿಕಾ ಜನರ ಆಸೆಗಳನ್ನು ಈಡೇರಿಸಲಿ ಎಂದು ಹೇಳಿದರು. ಈ ವೇಳೆ ಭಾವುಕರಾದ ಡೊನಾಲ್ಡ್ ಟ್ರಂಪ್, ಕ್ಯಾಪಿಟಲ್ ಹಿಲ್ ಮೇಲಿನ ದಾಳಿ ಹಾಗೂ ಚೀನಾದ ಕೊರೊನಾ ವೈರಸ್ ಹಾವಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಮೆರಿಕದ ೪೫ನೇ ಅಧ್ಯಕ್ಷರಾಗಿ ಅನೇಕ ಅಭಿವೃದ್ಧಿ ಪರ ಕೆಲಸ ಮಾಡಿದ್ದೇನೆ, ಕೊರೊನಾ ನಿಯಂತ್ರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅಮೇರಿಕಾದ ಆರ್ಥಿಕ ಸ್ಥಿತಿ ಸಹ ಉತ್ತಮವಾಗಿದೆ. ನಾನು ಸದಾ ಅಮೇರಿಕಾದ ಜನತೆಯ ಹಿತಕ್ಕಾಗಿ ಕೆಲಸ ಮಾಡಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಮೂವರು ಸೆರೆ
ಸುಳ್ಯ, ಜ. ೨೦: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಸುಳ್ಯ ತಾಲೂಕಿನ ಪಂಜ ವಲಯದ ಅರಣ್ಯಾಧಿಕಾರಿಗಳು ಜಾಲ್ಸೂರು ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಜಾಲ್ಸೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಮಜೀದ್ ನಡುವಡ್ಕ, ಮೊಹಮ್ಮದ್ ಸೋಯಾಬ್ ದೇಲಂಪಾಡಿ ಮತ್ತು ಅಭಿಲಾಶ್ ಗೌಡ ಅರಕಲಗೂಡು ಬಂಧಿತರು. ಅಮರಮುಡ್ನೂರು ಗ್ರಾಮದ ದೊಡ್ಡಿಹಿತ್ಲು ಎಂಬಲ್ಲಿ ಆರೋಪಿಗಳು ಮರಗಳನ್ನು ಕಡಿದು ಸಂಗ್ರಹಿಸಿದ್ದರು ಪಂಜ ವಲಯ ಅರಣ್ಯ ಅಧಿಕಾರಿಗಳು ಮರದ ದಿಮ್ಮಿಗಳನ್ನು ಮತ್ತು ಟ್ರಕ್, ಜೆಸಿಬಿ ಮತ್ತು ಬೊಲೆರೊ ಜೀಪ್ ಅನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ದಿಮ್ಮಿಗಳು ಹಾಗೂ ವಾಹನಗಳ ಒಟ್ಟು ಮೌಲ್ಯ ರೂ. ೧೫ ಲಕ್ಷ ಎಂದು ಅಂದಾಜಿಸಲಾಗಿದೆ. ಕರ್ನಾಟಕ-ಕೇರಳ ಗಡಿಯಿಂದ ೨೭ ಮರದ ದಿಮ್ಮಿಗಳು ಮತ್ತು ಒಂದು ಲಾರಿಯನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ ರೂ. ೫ ಲಕ್ಷ ಎಂದು ಅಂದಾಜಿಸಲಾಗಿದೆ.
ಆಧಾರ್ ಸಿಂಧುತ್ವ-ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ, ಜ. ೨೦: ಕೇಂದ್ರದ ಆಧಾರ್ ಯೋಜನೆಯನ್ನು ಸಂವಿಧಾನಾತ್ಮಕವಾಗಿ ಮಾನ್ಯವೆಂದು ಎತ್ತಿಹಿಡಿದಿರುವ ೨೦೧೮ ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆದರೆ ಬ್ಯಾಂಕ್ ಖಾತೆಗಳು, ಮೊಬೈಲ್ ಫೋನ್ ಮತ್ತು ಶಾಲಾ ಪ್ರವೇಶಕ್ಕಾಗಿ ಅದರ ಲಿಂಕ್ ಸೇರಿದಂತೆ ಕೆಲವು ನಿಬಂಧನೆಗಳನ್ನು ಅದು ತೆಗೆದುಹಾಕಿದೆ. ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ೪:೧ ರ ಬಹುಮತದಿಂದ ಸುಪ್ರೀಂ ಕೋರ್ಟ್ನ ಸೆಪ್ಟೆಂಬರ್ ೨೬, ೨೦೧೮ ರ ತೀರ್ಪಿನ ವಿರುದ್ಧದ ಮರುಪರಿಶೀಲನೆ ಅರ್ಜಿಯನ್ನು ತಿರಸ್ಕರಿಸಿತು.
ಬೆಟ್ಟಿಂಗ್: ಬುಕ್ಕಿ ಬಂಧನ
ಬೆAಗಳೂರು, ಜ. ೨೦: ಭಾರತ ಮತ್ತು ಆಸ್ಟೆçÃಲಿಯಾ ನಡುವಿನ ಅಂತಿಮ ಟೆಸ್ಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಬುಕ್ಕಿಯೋರ್ವನನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕ್ರಿಕೆಟ್ ಬುಕ್ಕಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದು, ಬಂಧಿತನಿAದ ಸುಮಾರು ೨,೫೧,೦೦೦ ರೂಗಳನ್ನು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಆತನಿಂದ ಹಲವು ಮೊಬೈಲ್ ಫೋನ್‌ಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.