ಸೋಮವಾರಪೇಟೆ, ಜ. ೨೦: ಸಮೀಪದ ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯ ಸಮಿತಿಯ ಆಶ್ರಯದಲ್ಲಿ ತಾ. ೨೩ ರಂದು ದೇವಾಲಯದಲ್ಲಿ ವಿವಿಧ ದೈವಗಳ ನೇಮೋತ್ಸವ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗಿನಿಂದಲೇ ದೇವಾಲಯದಲ್ಲಿ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ, ಶ್ರೀವರ್ನಾರ ಪಂಜುರ್ಲಿ ಮತ್ತು ಶ್ರೀಮಂತ್ರವಾದಿ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.