ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೨೦: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್‌ಟಿ) ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಎಚ್‌ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‌ಟಿ-ಪಿಎಚ್‌ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರöಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದ್ದು. ೨೦೨೦-೨೧ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜನಿಯರಿAಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿಎಚ್‌ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ ೧೦ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್‌ಗಾಗಿ hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.