ಕುಶಾಲನಗರ, ಜ. ೨೦: ಸರಕಾರಿ ಶಾಲೆಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುತ್ತಿರುವ ಯೂತ್ ಅಸೋಷಿಯೇಷನ್ ಕಾರ್ಯ ಶ್ಲಾಘನೀಯ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಹೇಳಿದರು. ಮಾದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯೂತ್ ಅಸೋಷಿಯೇಷನ್ ವತಿಯಿಂದ ನೀಡಲಾದ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಎಸ್.ಡಿ.ಎಂ.ಸಿ. ಅಧಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘುದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಕರ ಅಧೀಕ್ಷಕ ಡಾ. ಸದಾಶಿವ ಪಲ್ಲೇದ್ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಯೋಗೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜು, ಜಿಲ್ಲಾ ಉಪಾಧ್ಯಕ್ಷೆ ಎಸ್.ಕೆ. ಸೌಭಾಗ್ಯ, ದಾನಿಗಳಾದ ಗಣೇಶ್, ದುಬೈ ಹಂಸ, ಸರಳಕುಮಾರಿ, ಮುಖ್ಯ ಶಿಕ್ಷಕಿ ಪಾರ್ವತಿ, ಸಿ.ಅರ್.ಪಿ.ಗಳಾದ ಚಿನ್ನಪ್ಪ, ವಸಂತ್ ಕುಮಾರ್, ಸಂಯೋಜಕ ಶಿವಲಿಂಗ ಸೇರಿದಂತೆ ಇನ್ನಿತರರು ಇದ್ದರು. ಯೂತ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ತಿಮ್ಮಯ್ಯ, ರಾಜಶೇಖರ್, ಮನೋಹರ್ ಮತ್ತು ಸ್ಮಾರ್ಟ್ ಕ್ಲಾಸ್ ಪರಿಕರಗಳ ದಾನಿಗಳಾದ ಗಣೇಶ್, ದುಬೈಹಂಸ, ಸರಳಕುಮಾರಿ ಅವರನ್ನು ಸನ್ಮಾನಿಸಲಾಯಿತು.