ಕೂಡಿಗೆ, ಜ. ೨೦: ಹೆಬ್ಬಾಲೆ ಕ್ಲಸ್ಟರ್‌ನ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಹಾಗೂ ಸಹಶಿಕ್ಷಕರೊಂದಿಗೆ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂವಾದ ಕಾರ್ಯಕ್ರಮ ಹೆಬ್ಬಾಲೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಶಾಲೆಗಳಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಮತ್ತು ಅನುಸರಿಸಬೇಕಾದ ನಿಯಮಗಳ ಬಗ್ಗೆ ಚರ್ಚಿಸಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ. ಗಣೇಶ, ವಸಂತ ಎಂ.ಪಿ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರಪೇಟೆ, ಕರುಂಬಯ್ಯ ಹೆಚ್.ಪಿ. ಸೋಮವಾರಪೇಟೆಯ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಪ್ರಸನ್ನಕುಮಾರ್, ಹೆಬ್ವಾಲೆ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಂ. ವೆಂಕಟೇಶ ಹಾಗೂ ಕ್ಲಸ್ಟರ್ ಅಧಿಕಾರಿಗಳಾದ ಗಿರೀಶ ಹೆಚ್. ಸಿ.ಆರ್.ಪಿ. ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆ ಹೆಬ್ಬಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಮೀನಾಕ್ಷಿ ಟಿ.ಎ. ಹಾಗೂ ಸರ್ಕಾರಿ ಪ್ರೌಢಶಾಲೆ ತೊರೆನೂರುವಿನಲ್ಲಿ ವಯೋನಿವೃತ್ತಿ ಹೊಂದಿದ ಪದ್ಮನಾಭ ಎನ್.ಎಸ್. ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಹೆಬ್ಬಾಲೆ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಗಿರೀಶ್ ಸ್ವಾಗತಿಸಿ, ವಂದಿಸಿದರು.