ಮಡಿಕೇರಿ, ಜ. ೨೦: ಜಿಲ್ಲೆಯಲ್ಲಿ ತಾ. ೨೦ ರಂದು ಹೊಸದಾಗಿ ೫ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೬,೮೯೮ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೫೫ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೧೦ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೬೪ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೯ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೫೫ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೬ ನಿಯಂತ್ರಿತ ವಲಯಗಳಿವೆ.

ಜಿಲ್ಲೆಯಲ್ಲಿ ಒಟ್ಟು ೪೨೧೧ ಶಿಕ್ಷಕರಿಗೆ, ೭,೬೫೨ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.