ಮಡಿಕೇರಿ, ಜ.೨೨: ತಾಳತ್ಮನೆ ನೇತಾಜಿ ಯುವಕ ಮಂಡಲ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಯುವ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಭಾರತದ ಮಹಾನ್ ಸ್ವಾತಂತ್ರö್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೪ ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ ೨೯ ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾ ಪಂದ್ಯಾವಳಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ತಾ. ೨೩ ರಂದು ತಾಳತ್ತಮನೆ ಆಟದ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ ೯ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.