ಗೋಣಿಕೊಪ್ಪ ವರದಿ, ಜ. ೨೧: ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ತಾ. ೨೨ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಗೋಣಿಕೊಪ್ಪದಲ್ಲಿರುವ ಕಾವೇರಿ ಮಹಿಳಾ ಸಮಾಜ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಘದ ಅಧ್ಯಕ್ಷ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಷ್ಟಿçÃಯ ಸಮಿತಿ ಸದಸ್ಯ ಎಸ್.ಎ. ಮುರಳಿಧರ್, ವೀಕ್ಷಕ ಕೆ.ಎ. ಆದಿತ್ಯ ಭಾಗವಹಿಸಲಿದ್ದಾರೆ.
ಬೆಳಿಗ್ಗೆ ೧೧.೩೦ ಗಂಟೆಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರಾದ ಸಣ್ಣುವಂಡ ಕಿಶೋರ್ ನಾಚಪ್ಪ, ಹೆಚ್.ಕೆ. ಜಗದೀಶ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅತಿಥಿಗಾಗಿ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲಿರ ಚಲನ್‌ಕುಮಾರ್, ಆರ್.ಎಂ.ಸಿ. ನಿರ್ದೇಶಕ ಗುಮ್ಮಟ್ಟೀರ ಕಿಲನ್ ಗಣಪತಿ ಭಾಗವಹಿಸಲಿದ್ದಾರೆ.