ಮಡಿಕೇರಿ, ಜ.೨೧: ಕಳೆದ ೧೫ ವರ್ಷಗಳಿಂದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಹೆಬ್ಬಾಲೆ ಗ್ರಾಮದ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಐಎಎಸ್ ಶ್ರೇಣಿಗೆ ಬಡ್ತಿ ನೀಡಲಾಗಿದೆ.ಮಡಿಕೇರಿ, ಜ. ೨೧: ಗೋಣಿಕೊಪ್ಪಲಿನ ‘ಅಶ್ವಿನಿ ಸ್ಪೋರ್ಟ್ಸ್ ಫೌಂಡೇಶನ್’ ವತಿಯಿಂದ ತರಬೇತಿ ಪಡೆದ ಕ್ರೀಡಾಪಟುಗಳಾದ ಜ್ಯೋತಿಕಾ ಹಾಗೂ ಸಿಂಸ ಗಣಪತಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಸಾಧನೆಗೈದಿದ್ದಾರೆ. ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಸ್ಟೇಟ್ ಜೂನಿಯರ್ ಚಾಂಪಿಯನ್‌ಶಿಪ್‌ನ ೧೮ರ ವಯೋಮಿತಿ ಒಳಗಿನ ೪೦೦ ಮೀಟರ್ ಓಟದಲ್ಲಿ ಜ್ಯೋತಿಕಾ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಹರ್ಡ್ಲ್ಸ್ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ೨೦ ರ ಒಳಗಿನ ವಯೋಮಿತಿ ವಿಭಾಗದಲ್ಲಿ ಸಿಂಸ ಗಣಪತಿ ಹರ್ಡ್ಲ್ಸ್ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಮುಂದಿನ ತಿಂಗಳು ಅಸ್ಸಾಂನಲ್ಲಿ ನಡೆಯಲಿರುವ ರಾಷ್ಟçಮಟ್ಟದ ಕ್ರೀಡಾಕೂಟದಲ್ಲಿ ಇಬ್ಬರೂ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

೨೦೧೮ರಲ್ಲಿ ನಾಗೇಂದ್ರ ಪ್ರಸಾದ್ ಅವರಿಗೆ ಪದೋನ್ನತಿಗೆ ಶಿಫಾರಸ್ಸು ಮಾಡಲಾಗಿತ್ತು.

ಯುಪಿಎಸ್ಸಿ ಆಯ್ಕೆ ಸಮಿತಿ ಸಭೆಯಲ್ಲಿ ಜ್ಯೇಷ್ಠತೆ ಆಧಾರದಲ್ಲಿ ಐಎಎಸ್ (ಕರ್ನಾಟಕ ಕೇಡರ್) ಶ್ರೇಣಿಗೆ ಪದೋನ್ನತಿ ನೀಡಲಾಗಿದೆ.

ಪ್ರಸಾದ್ ಅವರು ಮೂಲತಃ ಹೆಬ್ಬಾಲೆ ಗ್ರಾಮದ ನಿವಾಸಿಯಾಗಿದ್ದು, ಇದೀಗ ಕುಶಾಲನಗರ ಬಳಿಯ ಮುಳ್ಳುಸೋಗೆ ಕುವೆಂಪು ಬಡಾವಣೆಯಲ್ಲಿ ವಾಸವಾಗಿದ್ದಾರೆ. ಆರೋಗ್ಯ ಸಚಿವ ಡಾ.ಸುಧಾಕರ್ ಅವರ ಆಪ್ತ ಕಾರ್ಯದರ್ಶಿಯಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.