ಮಡಿಕೇರಿ, ಜ.೨೨; ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರಿಂದು ಕೋಟೆ ಅರಮನೆ ಕಾಮಗಾರಿ ಪರಿಶೀಲನೆ ಮಾಡಿದರು.
ಪುರಾತನ ಕೋಟೆ ಅರಮನೆ ಶಿಥಿಲಾವಸ್ಥೆಯಲ್ಲಿದ್ದು, ನವೀಕರಣ ಕಾಮಗಾರಿ ನಡೆಯುತ್ತಿದೆ. ನವೀಕರಣ ಕಾಮಗಾರಿ ವಿಳಂಬವಾಗುತ್ತಿದೆ ಹಾಗೂ ಕಾಮಗಾರಿ ಕಳಪೆಯಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ವಿರೂಪಾಕ್ಷಪ್ಪ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಕಾಮಗಾರಿಯನ್ನು ಅರ್ಜಿದಾರ ರೊಂದಿಗೆ ತೆರಳಿ ಪರಿಶೀಲಿಸಿ ೧೫ ದಿನಗಳೊಳಗೆ ವರದಿ ಸಲ್ಲಿಸುವಂತೆ ತಾ.೧೨ರಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು; ನ್ಯಾಯಾಲಯದ ಸೂಚನೆಯಂತೆ ಪರಿಶೀಲನೆ ಮಾಡಿದ್ದು, ಮಡಿಕೇರಿ, ಜ.೨೨; ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರಿಂದು ಕೋಟೆ ಅರಮನೆ ಕಾಮಗಾರಿ ಪರಿಶೀಲನೆ ಮಾಡಿದರು.
ಪುರಾತನ ಕೋಟೆ ಅರಮನೆ ಶಿಥಿಲಾವಸ್ಥೆಯಲ್ಲಿದ್ದು, ನವೀಕರಣ ಕಾಮಗಾರಿ ನಡೆಯುತ್ತಿದೆ. ನವೀಕರಣ ಕಾಮಗಾರಿ ವಿಳಂಬವಾಗುತ್ತಿದೆ ಹಾಗೂ ಕಾಮಗಾರಿ ಕಳಪೆಯಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ವಿರೂಪಾಕ್ಷಪ್ಪ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಕಾಮಗಾರಿಯನ್ನು ಅರ್ಜಿದಾರ ರೊಂದಿಗೆ ತೆರಳಿ ಪರಿಶೀಲಿಸಿ ೧೫ ದಿನಗಳೊಳಗೆ ವರದಿ ಸಲ್ಲಿಸುವಂತೆ ತಾ.೧೨ರಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು; ನ್ಯಾಯಾಲಯದ ಸೂಚನೆಯಂತೆ ಪರಿಶೀಲನೆ ಮಾಡಿದ್ದು, ಒತ್ತುವರಿಯಾಗಿದೆ. ಇದನ್ನು ತೆರವುಗೊಳಿಸಿ ಐತಿಹಾಸಿಕ ಪ್ರದೇಶವನ್ನು ಸಂರಕ್ಷಿಸಬೇಕಿದೆ, ಈ ನಿಟ್ಟಿನಲ್ಲಿ ಪ್ರಯತ್ನವಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಾಂದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಬೆಂಗಳೂರು ವರ್ತುಲದ ಅಧೀಕ್ಷಕ ಶಿವಕಾಂತ್ ಬಾಜಪೇ, ಸಹಾಯಕ ಅಧೀಕ್ಷಕ ಶ್ರೀಗುರು ಭಾಗಿ, ಉಪ ಅಧೀಕ್ಷಕ ಅಭಿಯಂತರ ರಂಗನಾಥ, ಸಹಾಯಕ ಅಭಿಯಂತರ ಚಂದ್ರಕಾAತ, ಸಹಾಯಕ ಸಂರಕ್ಷಣಾಧಿಕಾರಿ ಸುಕುಮಾರ ಕೆ.ಎಂ., ಇತರರು ಇದ್ದರು.