ಗೋಣಿಕೊಪ್ಪಲು, ಜ. ೨೧: ಕಳೆದ ೧೨ ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತಗೊAಡು ಜೀವನ ನಡೆಸುತ್ತಿದ್ದೇವೆ. ಸೌಕರ್ಯಕ್ಕಾಗಿ ಅನೇಕ ಹೋರಾಟಗಳು ನಡೆಸಿದ್ದರೂ ಇಲ್ಲಿಯ ತನಕ ಅವಶ್ಯವಿರುವ ಮೂಲಭೂತ ಸೌಕರ್ಯಗಳು ದೊರಕದೇ ಇರುವ ಹಿನ್ನೆಲೆ ಅನಿವಾರ್ಯವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ತೀರ್ಮಾನಕ್ಕೆ ಬರಲಾಗಿದೆ ಗೋಣಿಕೊಪ್ಪಲು, ಜ. ೨೧: ಕಳೆದ ೧೨ ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತಗೊAಡು ಜೀವನ ನಡೆಸುತ್ತಿದ್ದೇವೆ. ಸೌಕರ್ಯಕ್ಕಾಗಿ ಅನೇಕ ಹೋರಾಟಗಳು ನಡೆಸಿದ್ದರೂ ಇಲ್ಲಿಯ ತನಕ ಅವಶ್ಯವಿರುವ ಮೂಲಭೂತ ಸೌಕರ್ಯಗಳು ದೊರಕದೇ ಇರುವ ಹಿನ್ನೆಲೆ ಅನಿವಾರ್ಯವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ತೀರ್ಮಾನಕ್ಕೆ ಬರಲಾಗಿದೆ ಜಿಲ್ಲಾಡಳಿತಕ್ಕೆ ಒಂದು ತಿಂಗಳ ಗಡುವು ನೀಡಲಾಗುವುದು. ತಪ್ಪಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಲ್ಲಿನ ೬೦ ಕುಟುಂಬದ ಸದಸ್ಯರುಗಳು ಮಕ್ಕಳಾದಿಯಾಗಿ ಅಮರಣಾಂತ ಉಪವಾಸ ಕೈಗೊಳ್ಳಲಾಗುವುದೆಂದು ಹೇಳಿದರು.

ಅರುವತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದೂರು ಸಮೀಪ ಕಳೆದ ೧೨ ವರ್ಷಗಳಿಂದ ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿರುವ ಇಲ್ಲಿಯ ಕುಟುಂಬಗಳು ಕುಡಿಯುವ ನೀರು, ವಿದ್ಯುಚ್ಛಕ್ತಿ, ಶೌಚಾಲಯ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ಮತದಾನ ಮಾಡುವ ಇಲ್ಲಿಯ ಜನರಿಗೆ ಇಲ್ಲಿಯ ತನಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿದೆ. ನೂರಾರು ಮನವಿ ಪತ್ರಗಳು ಸಲ್ಲಿಸಿದ್ದರೂ ಯಾವ ಪ್ರಯೋಜನಗಳು ಇಲ್ಲಿಯ ತನಕ ಸಿಕ್ಕಿರುವುದಿಲ್ಲ. ಅದ್ದರಿಂದ ಅನಿವಾರ್ಯವಾಗಿ ನಮ್ಮ ಹಕ್ಕುಗಳನ್ನು ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಮರಣಾಂತ ಉಪವಾಸ ಕೈಗೊಳ್ಳುವ ಅನಿವಾರ್ಯತೆ ಬಂದೊದಗಿದೆ ಎಂದು ಕಾಲೋನಿಯ ಮುಖಂಡರಾದ ಪಿ.ಎಸ್. ಸುಬ್ಬ, ಯಮುನ, ಜ್ಯೋತಿ, ಸುಬ್ರಮಣಿ, ಗಣೇಶ್, ಜೋಗಿ, ಭರತ್ ತಿಳಿಸಿದರು.