ಮಡಿಕೇರಿ, ಜ. ೨೨: ಜಿಲ್ಲೆಯಲ್ಲಿ ತಾ. ೨೨ರಂದು ಹೊಸದಾಗಿ ೯ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೮,೧೪೧ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೬೭ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೩೨ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೫೪ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೭ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೭ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೨ ನಿಯಂತ್ರಿತ ವಲಯಗಳಿವೆ.
ಜಿಲ್ಲೆಯಲ್ಲಿ ಒಟ್ಟು ೪೨೪೪ ಶಿಕ್ಷಕರಿಗೆ, ೭,೯೦೭ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.