ಮಡಿಕೇರಿ, ಜ.೨೨: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕೊಡಗು ಜಿಲ್ಲೆಯಲ್ಲಿ ತಾ. ೨೩ ಮತ್ತು ೨೪ ರಂದು ನಡೆಯಲಿರುವ ಕರ್ನಾಟಕ ಭವನ, ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪçಕಿçಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಭನ್ವರ್ ಸಿಂಗ್ ಮೀನಾ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ, ಸಂತ ಮೈಕಲರ ಶಾಲೆ, ಮಡಿಕೇರಿ, ಸಂತ ಜೋಸೆಫರ ಶಾಲೆ, ಮಡಿಕೇರಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಮಡಿಕೇರಿ ಪರೀಕ್ಷಾ ಕೇಂದçಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪçದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.