ಮಡಿಕೇರಿ, ಜ. ೨೧: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡುವ ಹೊಸ ಯೋಜನೆ ಅನುಷ್ಠಾನ ಮಾಡಬೇಕಿದೆ.

ಅರ್ಹ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ೧೯ ವರ್ಷ ಒಳಪಟ್ಟ ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಹಾಗೂ ಹಿಂದಿನ ಕ್ಯಾಲೆಂಡರ್ ವರ್ಷಗಳಲ್ಲಿ ಅಂತರರಾಷ್ಟಿçÃಯ, ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ ಅಂತರ್‌ರಾಜ್ಯ/ ಅಂತರ್-ವಿಶ್ವವಿದ್ಯಾನಿಲಯ/ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ದಾಖಲಿಸಿರುವ ಪ್ರತಿಭಾವಂತ ಕ್ರೀಡಾಪಟುಗಳಿಂದ (ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ೧೯ ವರ್ಷ ಒಳಪಟ್ಟ ಕ್ರೀಡಾಪಟುಗಳು ಫೆಬ್ರವರಿ ೨ ರೊಳಗೆ ಈ ಕಚೇರಿಯಲ್ಲಿ ಕ್ರೀಡಾ ಸಾಧನೆಯ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.

ಸಹಾಯಧನ ನೀಡುವ ಹೊಸ ಯೋಜನೆಗೆ

ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಪ್ರತಿ ತಾಲೂಕಿನ ಪರಿಶಿಷ್ಟ ಜಾತಿಯ ಎರಡು ಸಂಘ-ಸAಸ್ಥೆಗಳಿಗೆ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಒಂದು ಯುವಜನ ಸಂಘ-ಸAಸ್ಥೆಗಳಿಗೆ ನೋಂದಾಣಿ ಮಾಡಲು ಸಹಾಯಧನ ನೀಡುವ ಹೊಸ ಯೋಜನೆ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳು ಫೆಬ್ರವರಿ ೨ ರೊಳಗೆ ಈ ಕಚೇರಿಯಲ್ಲಿ ನೋಂದಾವಣೆ ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ಅವರು ಕೋರಿದ್ದಾರೆ.