ಮಡಿಕೇರಿ, ಜ. ೨೨: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿರುವ ನಿಧಿ ಸಮರ್ಪಣಾ ಅಭಿಯಾನದಡಿಯಲ್ಲಿ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ರಾಷ್ಟಿçÃಯ ಸ್ವಯಂಸೇವಕ ಸಂಘದ ಕೆ.ಕೆ. ಮಹೇಶ್ ಕುಮಾರ್ ಅವರ ಮೂಲಕ ಮಡಿಕೇರಿಯ ತಮ್ಮ ಮನೆಯಲ್ಲಿ ನಿಧಿಯನ್ನು ಸಮರ್ಪಿಸಿದರು.
ನಿಧಿ ಸಮರ್ಪಿಸಿ ಮಾತನಾಡಿದ ಕೆ.ಜಿ. ಬೋಪಯ್ಯ ಅವರು ೧೯೯೨ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ತಾವು ಪಾಲ್ಗೊಂಡ ನೆನಪುಗಳನ್ನು ಹಂಚಿಕೊAಡರು. ರಾಮಂದಿರ ನಿರ್ಮಾಣಕ್ಕೆ ನಿಧಿಯನ್ನು ಸಮರ್ಪಿಸಿದ್ದು ತÀನ್ನ ಸೌಭಾಗ್ಯ ಇದೊಂದು ಪವಿತ್ರ ಕಾರ್ಯವಾಗಿದ್ದು, ಮನೆ ಮನೆಗೆ ಕಾರ್ಯಕರ್ತರು ಬಂದಾಗ ರಶೀದಿ ಪಡೆದು ತಮ್ಮ ಕೈಲಾದಷ್ಟು ಹಣವನ್ನು ಪ್ರೀತಿ ಪೂರ್ವಕವಾಗಿ ಸಮರ್ಪಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ರಾಷ್ಟಿçÃಯ ಸ್ವಯಂಸೇವಕ ಸಂಘದ ಅರುಣ್ ಕೂರ್ಗ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಪಿ.ಎಂ. ರವಿ, ಬಿ.ಜೆ.ಪಿಯ ಪೊನ್ನಚ್ಚನ ಮಧು, ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಮಹೇಶ್ ಅಪ್ಪು, ಈಶ್ವರ್ ಹಾಗೂ ಯುವ ಮೋರ್ಚಾದ ವಿವೇಕ್ ನರೇನ್ ಇದ್ದರು.
ಇದೊಂದು ಪವಿತ್ರ ಕಾರ್ಯವಾಗಿದ್ದು, ಮನೆ ಮನೆಗೆ ಕಾರ್ಯಕರ್ತರು ಬಂದಾಗ ರಶೀದಿ ಪಡೆದು ತಮ್ಮ ಕೈಲಾದಷ್ಟು ಹಣವನ್ನು ಪ್ರೀತಿ ಪೂರ್ವಕವಾಗಿ ಸಮರ್ಪಿಸಬೇಕು ಎಂದು ಮನವಿ ಮಾಡಿದರು.