ವೀರಾಜಪೇಟೆ, ಜ. ೨೩: ಅಪ್ರಾಪ್ತೆ ಮೇಲೆ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇರೆ ಕೆದಮುಳ್ಳೂರು ಗ್ರಾಮದ ನಿಸಾರ್ ಎಂಬಾತನನ್ನು ಇಂದು ಇಲ್ಲಿನ ಗ್ರಾಮಾಂತರ ಪೊಲೀಸರು ಬಂಧಿಸಿ ಇಲ್ಲಿನ ಎರಡನೇ ಅಪರ ಅಡಿಷನಲ್ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನನ್ನು ೧೫ ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿಡುವAತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ತಾ. ೨೧ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಕೆದಮುಳ್ಳೂರು ಗ್ರಾಮದಲ್ಲಿ ಹಸಿಮೀನು ಮಾರಾಟ ಮಾಡಿಕೊಂಡು ಗ್ರಾಮಕ್ಕೆ ಬಂದ ನಿಸಾರ್ ಅಪ್ರಾಪ್ತೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದನೆಂದು ಆಕೆಯ ಪೋಷಕರು ಇಲ್ಲಿನ ಗ್ರಾಮಾಂತರ ಪೊಲೀಸರಿಗೆ ನೀಡಿದ ದೂರಿನ ಮೇರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಹಾಗೂ ಜಾತಿನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.