ಮಡಿಕೇರಿ, ಜ. ೨೩: ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತ ಸೋಮಲ್ ಅವರು ನೇಮಕಗೊಂಡಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಭಾರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿಇಓ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು.
ಚಾರುಲತ ಸೋಮಲ್ ಅವರು ಈ ಹಿಂದೆ ಕೊಡಗು ಜಿ.ಪಂ.ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.