ಮಡಿಕೇರಿ, ಜ. ೨೩: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ೨೦೧೯ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬAಧಿಸಿದAತೆ ತಾ. ೨೩ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ತಾ. ೨೪ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

ಈ ನಡುವೆ ತಾ. ೨೩ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊಂಡ ಮಾಹಿತಿಯ ಪ್ರಕಾರ ತಾ. ೨೪ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ, ತಾ. ೨೪ರಂದು ನಡೆಯಬೇಕಾಗಿದ್ದ ೨೦೧೯ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಮರು ನಿಗದಿಪಡಿಸಿ ಪ್ರಕಟಿಸಲಾಗುವುದೆಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.