ಶನಿವಾರಸಂತೆ, ಜ. ೨೩: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯನ್ನು ೧೯೮೩ರಲ್ಲಿ ಹಾಗೂ ಪಿ.ಯು. ಕಾಲೇಜಿನಲ್ಲಿ ದ್ವಿತೀಯ ಪಿಯುವನ್ನು ೧೯೮೫ರಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸ್ನೇಹ ಸೌರಭ ಕಾರ್ಯಕ್ರಮ ತಾ. ೨೪ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಶ್ರೀಶಾಂತಮಲ್ಲಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಹೈಕೋರ್ಟ್ ಹಿರಿಯ ವಕೀಲ ಹಾಗೂ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್. ಚಂದ್ರಮೌಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಗೌರವಾಧ್ಯಕ್ಷ ಎಸ್.ಎಸ್. ನಾಗರಾಜ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಶಂಭುಲಿAಗಪ್ಪ, ಕಾರ್ಯದರ್ಶಿ ಕೆ.ಎಸ್. ಪರಮೇಶ್, ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕರಾದ ಶಿವಪ್ರಸಾದ್, ಕೆ.ಬಿ. ನಾಗರಾಜ್, ಸಿ.ಟಿ. ನಾಗರಾಜ್, ಡಿ.ವಿ. ಹರೀಶ್, ಬಿ.ಕೆ. ಯತೀಶ್, ಸುಲೋಚನಾ ಗಿರೀಶ್ ಪಾಲ್ಗೊಳ್ಳಲಿದ್ದಾರೆ.