ಮಡಿಕೇರಿ, ಜ. ೨೩: ಜಿಲ್ಲೆಯಲ್ಲಿ ತಾ. ೨೩ ರಂದು ಹೊಸದಾಗಿ ೩ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೮,೭೩೮ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೭೦ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೪೧ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೪೮ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೬ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೨ ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೧ ನಿಯಂತ್ರಿತ ವಲಯಗಳಿವೆ.
ಜಿಲ್ಲೆಯಲ್ಲಿ ಒಟ್ಟು ೪,೨೪೪ ಶಿಕ್ಷಕರಿಗೆ, ೮,೦೧೬ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.