ಮಡಿಕೇರಿ, ಜ.೨೫: ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೊದಲನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸಲು ರಾಜ್ಯ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಆ ದಿಸೆಯಲ್ಲಿ ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ತಾ. ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿ.ಪಂ.ಸಭಾAಗಣದಲ್ಲಿ ಎಲ್ಲಾ ಸದಸ್ಯರುಗಳ ಸಭೆ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ ತಾ. ೨೭ ರಂದು ಮಧ್ಯಾಹ್ನ ೨.೩೦ ಗಂಟೆಗೆ ಕುಶಾಲನಗರದ ರೈತ ಭವನದಲ್ಲಿ ಸಭೆ ನಡೆಯಲಿದೆ.
ವೀರಾಜಪೇಟೆ ತಾಲೂಕಿಗೆ ಸಂಬAಧಿಸಿದAತೆ ಜನವರಿ, ೨೮ ರಂದು ಮಧ್ಯಾಹ್ನ ೨.೩೦ ಗಂಟೆಗೆ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಸದಸ್ಯರುಗಳ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.