ಮಡಿಕೇರಿ, ಜ. ೨೫: ಫೆಬ್ರವರಿ ೬ ರಂದು ರಾಷ್ಟçಪತಿ ರಾಮನಾಥ ಕೋವಿಂದ್ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ರಾಷ್ಟçಪತಿ ಅವರು ಪವಿತ್ರ ಪುಣ್ಯಕ್ಷೇತ್ರ ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಲಿದ್ದು, ತಲಕಾವೇರಿ ದೇವಾಲಯದ ಇತಿಹಾಸ, ವಿಶೇಷತೆ ಬಗ್ಗೆ ಮಾಹಿತಿ ನೀಡಬೇಕು. ಹೆಲಿಪ್ಯಾಡ್ ನಿರ್ಮಾಣ, ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವುದು. ದೇವಾಲಯದಲ್ಲಿ ರಾಷ್ಟçಪತಿ ಅವರ ಕಚೇರಿಯಿಂದ ಬಂದಿರುವ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿ ಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ರಾಷ್ಟçಪತಿ ಆಗಮನ ಹಿನ್ನೆಲೆ ಅಗತ್ಯ ಪೊಲೀಸ್ ಭದ್ರತೆ ಮಾಡಿಕೊಳ್ಳುವುದು. ಶಿಷ್ಟಾಚಾರದಂತೆ ಅಗತ್ಯ ಕ್ರಮವಹಿಸುವುದು. ಬ್ಯಾರಿಕೇಡ್ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವುದು ಕೋವಿಡ್ ನಿಯಮ ಪಾಲಿಸುವಂತೆ ನಿರ್ದೇಶನ ನೀಡುವುದು, ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯುವುದು. ಆರ್‌ಟಿಒ ಅವರು ಅಗತ್ಯ ವಾಹನವನ್ನು ಒದಗಿಸುವಂತೆ ನಿರ್ದೇಶನ ನೀಡಿದರು.

ಫೆಬ್ರವರಿ ೪ ಮತ್ತು ೫ ರಂದು ಡ್ರೆöÊರನ್ (ಪೂರ್ವ ತಯಾರಿ ಬಗ್ಗೆ ಪರಿಶೀಲನೆ) ಮಾಡಲಾಗುವುದು. ಅಗ್ನಿಶಾಮಕ ಇಲಾಖೆಯವರು ಹೆಲಿಪ್ಯಾಡ್ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವುದು. ಜನರಲ್ ತಿಮ್ಮಯ್ಯ ಸ್ಮಾರಕ ಬಳಿ ಪೆಟ್ರೋಲ್ ಬಂಕ್ ಇರುವುದರಿಂದ ನಿಯಮಾನುಸಾರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಆಹಾರ ಸುರಕ್ಷತೆ ಗಮನ ಹರಿಸುವುದು. ರಸ್ತೆ ಸರಿಪಡಿಸುವುದು. ಶಿಷ್ಟಾಚಾರದ ವ್ಯವಸ್ಥೆಯನ್ನು ಉಪ ವಿಭಾಗಾಧಿಕಾರಿಯವರು ನೋಡಿಕೊಳ್ಳುವುದು, ಭಾರತೀಯ ವಾಯು ಸೇನಾ ಅಧಿಕಾರಿಗಳಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು. ಅಗ್ನಿಶಾಮಕ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು. ಗಣ್ಯವ್ಯಕ್ತಿಗಳು ಆಗಮಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್. ರೂಪ, ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಪಿಡಬ್ಲುö್ಯಡಿ ಇಲಾಖೆ ಎಇಇ ಶಿವರಾಮ್, ನಗರಾಭಿವೃದ್ಧಿ ಯೋಜನಾ ಕೋಶದ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಬಿಂದುಶ್ರೀ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಆಹಾರ ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ತಾ.ಪಂ.ಇಒ ಲಕ್ಷಿö್ಮÃ, ತಹಶೀಲ್ದಾರ್ ಮಹೇಶ್ ಅವರು ಹಲವು ಮಾಹಿತಿ ನೀಡಿದರು.