ಸೋಮವಾರಪೇಟೆ, ಜ.೨೫: ಇಲ್ಲಿನ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ತಾ. ೩೧ರಂದು ಪೂರ್ವಾಹ್ನ ೧೦.೩೦ಕ್ಕೆ ಸ್ಥಳೀಯ ಕೊಡವ ಸಮಾಜದಲ್ಲಿ, ಸಂಘದ ಅಧ್ಯಕ್ಷ ಎ.ಆರ್. ಭರತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಎನ್. ರಂಗಸ್ವಾಮಿ ತಿಳಿಸಿದ್ದಾರೆ.