ಮಡಿಕೇರಿ,ಜ.೨೫:ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೦-೨೧ ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು. ಅಲ್ಪಸಂಖ್ಯಾತ ಸಮುದಾಯದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ). ಅರ್ಹ ಅಭ್ಯರ್ಥಿಗಳು ಜಿಲ್ಲಾ ಮತ್ತು ತಾಲೂಕು ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ತಾ. ೩೧ ರೊಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.