ಮಡಿಕೇರಿ, ಜ. ೨೫: ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ತಾ.೨೬ (ಇಂದು) ವೀರಾಜಪೇಟೆ ಅಪ್ಪಚ್ಚ ಕವಿ ವೃತ್ತದಲ್ಲಿರುವ ಅಪ್ಪನೆರವಂಡ ಅಪ್ಪಚ್ಚ ಕವಿ ಪ್ರತಿಮೆ ಪ್ರತಿಷ್ಠಾಪನಾ ದಿನಾಚರಣೆ ನಡೆಯಲಿದೆ ಎಂದು ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಮೆಗೆ ತಹಶೀಲ್ದಾರ್ ಯೋಗಾನಂದ ಅವರು ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.