ಮಡಿಕೇರಿ, ಜ.೨೫: ಜಿಲ್ಲಾಡಳಿತ ವತಿಯಿಂದ ತಾ. ೨೬ ರಂದು ಬೆಳಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷÀ ಶಾಂತೆಯAಡ ರವಿಕುಶಾಲಪ್ಪ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.