ಮಡಿಕೇರಿ, ಜ. ೨೫: ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಮುಂಭಾಗ ನಿರ್ಮಿಸಲಾಗಿರುವ ಬಸ್ ತಂಗುದಾಣವನ್ನು ತಾ.೨೬ ರಂದು (ಇಂದು) ಅನಾವರಣಗೊಳಿಸಲಾಗುತ್ತದೆ. ಮುಳಿಯ ಜ್ಯುವೆರ‍್ಸ್ ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣವನ್ನು ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಉದ್ಘಾಟಿಸಲಿದ್ದು, ನಂತರ ನಗರಸಭೆಗೆ ಹಸ್ತಾಂತರಿಸಲಾಗುವುದು.
ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ ಹಾಗೂ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಮುಳಿಯ ಗ್ರೂಪ್ ಅಧ್ಯಕ್ಷ ಕೇಶವ ಪ್ರಸಾದ್, ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಪೌರಾಯುಕ್ತ ರಾಮ್‌ದಾಸ್, ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಭಾಗವಹಿಸಲಿದ್ದಾರೆ.