ಮಡಿಕೇರಿ, ಜ. ೨೫: ಜಿಲ್ಲೆಯಲ್ಲಿ ತಾ.೨೫ ರಂದು ಹೊಸದಾಗಿ ೩ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೯,೭೫೯ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೮೧ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೫೫ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೪೫ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೪ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , ೪೧ ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೨೭ ನಿಯಂತ್ರಿತ ವಲಯಗಳಿವೆ.
ಜಿಲ್ಲೆಯಲ್ಲಿ ಒಟ್ಟು ೪,೨೪೫ ಶಿಕ್ಷಕರಿಗೆ, ೮,೧೦೦ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.