ಮಡಿಕೇರಿ: ಸುಭದ್ರವಾದ ರಾಷ್ಟçಕಟ್ಟಲು ನೇತಾಜಿ ಸುಭಾಷ್ ಚಂದ್ರಬೋಸ್‌ರವರು ದೇಶಕ್ಕೆ ನೀಡಿರುವ ಕೊಡಗೆ ಅಪಾರವಾಗಿದೆ ಎಂದು, ಹನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಕೆ ಪ್ರಕಾಶ್ ಅಭಿಪ್ರಾಯಪಟ್ಟರು.

ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಕಾಲೇಜಿನ ಬಿ.ಎ ವಿಭಾಗದ ಡಾ. ಎಪಿಜೆ ಅಬ್ದುಲ್ ಕಲಾಂ ಮೆಮೋರಿಯಲ್ ಹಾಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ೧೨೫ನೇ ಜಯಂತಿಯ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಆರಂಭಿಕ ಜೀವನ, ಭಾರತದ ಸ್ವಾತಂತ್ರ‍್ಯ ಚಳವಳಿಯಲ್ಲಿ ಅವರ ಪಾತ್ರ ಹಾಗೂ ಸುಭದ್ರ ರಾಷ್ಟçವನ್ನು ಕಟ್ಟಲು ನೇತಾಜಿ ಅವರು ನೀಡಿದ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ, ವಿದ್ಯಾರ್ಥಿಗಳು ಸುಭಾಷ್ ಚಂದ್ರಬೋಸ್ ಅವರ ಅಪ್ರತಿಮ ದೇಶಭಕ್ತಿ ಹಾಗೂ ಅವರ ಆದರ್ಶ ಆಶಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ, ಸಹಾಯಕ ಪ್ರಾಧ್ಯಾಪಕಿ ಶೃತಿ ಪಾರ್ವತಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸೋಮವಾರಪೇಟೆ: ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ಸಮೀಪದ ಮಸಗೋಡು ಚನ್ನಮ್ಮ ಪ್ರೌಢಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ವಹಿಸಿದ್ದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಎಚ್.ಜಿ. ಕುಟ್ಟಪ್ಪ, ಕಾರ್ಯದರ್ಶಿ ಆನಂದ, ಖಜಾಂಚಿ ಸಿ.ಬಿ. ತಿಮ್ಮಯ್ಯ, ಸಲಹೆಗಾರ ಎಂ.ಎ. ವೀರಪ್ಪ, ಗೌರವಾಧ್ಯಕ್ಷ ಹಾಲೇಬೇಲೂರು ನಿರ್ವಾಣಿಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.