ಮಡಿಕೇರಿ, ಜ. ೨೬: ಜಿಲ್ಲೆಯಲ್ಲಿ ತಾ. ೨೬ ರಂದು ಹೊಸದಾಗಿ ೯ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೪೦,೧೩೮ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೯೦ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೬೫ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೪೪ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೨ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೨ ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೨೮ ನಿಯಂತ್ರಿತ ವಲಯಗಳಿವೆ.
ಜಿಲ್ಲೆಯಲ್ಲಿ ಒಟ್ಟು ೪,೨೪೫ ಶಿಕ್ಷಕರಿಗೆ, ೮,೧೩೯ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.