ಕೂಡಿಗೆ, ಜ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದ ಬಸವೇಶ್ವರ ಯುವಕ ಸಂಘದ ವತಿಯಿಂದ ಮದಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು
ಕ್ರೀಡಾಕೂಟದ ಉದ್ಘಾಟನೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್ ನೆರವೇರಿಸಿ ಮಾತನಾಡಿ, ಕ್ರೀಡಾ ಪ್ರತಿಭಾನ್ವಿತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇರುವುದರಿಂದ ಅಂತಹ ಯುವಕರಿಗೆ ಪ್ರೋತ್ಸಾಹ ನೀಡುವ ಕೆಲಸ ಪ್ರಾಥಮಿಕ ಹಂತಗಳಲ್ಲಿ ಆಗಬೇಕಾಗಿದೆ ಎಂದರು.
ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಭುವನಗಿರಿ ತಂಡ ಪಡೆದುಕೊಂಡು ಟ್ರೋಫಿ ಮತ್ತು ನಗದನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನ ಬಸವೇಶ್ವರ ಯುವಕ ಸಂಘ ತೃತೀಯ ಸ್ಥಾನ ಶಿರಂಗಾಲ ತಂಡ ನಾಲ್ಕನೇ ಸ್ಥಾನವನ್ನು ಹುದುಗೂರು ತಂಡ ಪಡೆದುಕೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿಯ ಅಧ್ಯಕ್ಷ ಲಿಂಗಪ್ಪ ವಹಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷಿö್ಮÃ, ನಿವೃತ್ತ ಪೊಲೀಸ್ ಅಧಿಕಾರಿ ಕುಶಾಲಪ್ಪ, ಗ್ರಾಮದ ಪ್ರಮುಖರಾದ ಕೃಷ್ಣಪ್ಪ ಸ್ವಾಮಿ, ಮಣಿ, ಯುವಕ ಸಂಘದ ಅಧ್ಯಕ್ಷ ದಿನೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.