ಮಡಿಕೇರಿ, ಜ. ೨೭: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯು ಮಡಿಕೇರಿ ಘಟಕದ ತಾಲೂಕು ಅಧ್ಯಕ್ಷರಾಗಿ ಅಜಿತ್ ಕೊಟ್ಟಕೇರಿಯನ ಅವರನ್ನು ಆಯ್ಕೆ ಮಾಡಿದೆ.

ರಾಜ್ಯ ಸಮಿತಿಯ ಅಧ್ಯಕ್ಷ ಹೆಚ್.ಜಿ. ರಮೇಶ್ ಹೊರಡಿಸಿರುವ ಆದೇಶದಂತೆ, ಪ್ರಸ್ತುತ ಕೊಡಗು ಜೆಡಿಎಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕರಾಗಿರುವ ಅಜಿತ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.