ಮಡಿಕೇರಿ, ಜ.೨೭: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಸರ್ಕಾರಿ ಅಭಿಯೋಜನಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ವಿತರಣಾ ಕಾರ್ಯಕ್ರಮವು ತಾ. ೨೮ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿನರಾಳಕರ ಭೀಮರಾವ ಲಗಮಪ್ಪ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ೧ ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಿ.ಎಸ್.ಚಂದ್ರಶೇಖರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ವಿಜಯ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಬಿ.ಕೆ.ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಸ್ಮಿತಾ, ಸರ್ಕಾರಿ ಅಭಿಯೋಜಕಿ ಕೆ.ಜಿ.ಅಶ್ವಿನಿ ಇತರರು ಪಾಲ್ಗೊಳ್ಳಲಿದ್ದಾರೆ.