ಮಡಿಕೇರಿ, ಜ. ೨೮ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ತಾ. ೨೯ ರಂದು (ಇಂದು) ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕಾವೇರಿ ಹಾಲ್ನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.