ಕುಶಾಲನಗರ, ಜ ೨೭: ಮೈಸೂರು ಕೊಡಗು ಗಡಿಭಾಗದಲ್ಲಿ ನಿರ್ಮಾಣಗೊಂಡಿರುವ ಕಾವೇರಿ ಮಾತೆಯ ಪ್ರತಿಮೆಯನ್ನು ತೆರವುಗೊಳಿಸಲು ಉಚ್ಚ ನ್ಯಾಯಾಲಯದ ವಕೀಲರೊಬ್ಬರು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದ್ದಾರೆ.
ಕುಶಾಲನಗರ-ಕೊಪ್ಪ ಗಡಿಭಾಗದಲ್ಲಿ ನಿರ್ಮಾಣಗೊಂಡಿರುವ ಕಾವೇರಿ ಮಾತೆ ವಿಗ್ರಹ ರಸ್ತೆ ಬದಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣಗೊಂಡಿರುವುದಾಗಿ ವಕೀಲ ಎನ್.ಪಿ. ಅಮೃತೇಶ್ ಎಂಬವರು ಪಿರಿಯಾಪಟ್ಟಣ ತಾಲೂಕು ತಹಶೀಲ್ದಾರರಿಗೆ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಅರ್ಜಿ ಸಲ್ಲಿಸಿದ್ದು, ತಕ್ಷಣ ತೆರವುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತಾಲೂಕು ತಹಶೀಲ್ದಾರ್ ಸ್ಥಳೀಯ ಅಧಿಕಾರಿಗಳಿಗೆ ಇದರ ಬಗ್ಗೆ ಕ್ರಮಕೈಗೊಂಡು ವರದಿ ನೀಡುವಂತೆ ಸೂಚಿಸಿರುವುದು ಕಂಡುಬAದಿದೆ.