ಕಡಂಗ, ಜ. ೨೮: ೨೦೨೦ -೨೦೨೧ನೆ ಸಾಲಿನ ೬ನೇ ವರ್ಷದ ಕಡಂಗ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾಟ ತಾ. ೩೦ರಿಂದ ಫೆ.೨ರವರೆಗೆ ನಡೆಯಲಿದೆ. ತಾ. ೩೦ರಂದು ಬೆಳಿಗ್ಗೆ ೧೦ ಗಂಟೆಗೆ ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಮುಖ್ಯೋಪಾಧ್ಯಾಯಿನಿ ವೈ.ಎ. ತಂಗಮ್ಮ ಅವರ ಅಧ್ಯಕ್ಷತೆಯಲ್ಲಿ ಲೀಗ್ಗೆ ಚಾಲನೆ ದೊರೆಯಲಿದೆ ಎಂದು ಕೆಪಿಎಲ್ ಸ್ಥಾಪಕ ಹಾಗೂ ಅಧ್ಯಕ್ಷ ಕೆ.ಎಂ. ಜುನೈದ್ ತಿಳಿಸಿದ್ದಾರೆ. ಕ್ರೀಡಾಕೂಟದ ಲ್ಲಿ ಉನ್ನತ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಕೂಡ ತಿಳಿಸಿದ್ದಾರೆ.