ಸೋಮವಾರಪೇಟೆ, ಜ. ೨೮: ಕೊರೊನಾ ಲಾಕ್‌ಡೌನ್ ಸಂದರ್ಭ ವ್ಯಾಪಾರ ವಟಿವಾಟು ಇಲ್ಲದೇ ಸಂಕಷ್ಟಕ್ಕೆ ಸಿಲುಕಿರುವ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಟೆಂಡರ್ ಪಡೆದಿರುವ ವರ್ತಕರ ಅವಧಿಯನ್ನು ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಕೋರಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಪ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ಪ.ಪಂ. ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಬಗ್ಗೆ ಚರ್ಚೆ ನಡೆಸಿದರು.ಪ.ಪಂ.ನ ವಾರ್ಷಿಕ ಟೆಂಡರ್ ಮೂಲಕ ಸಂತೆ ಸುಂಕ, ಸಂತೆ, ಅಂಗಡಿ ಮಳಿಗೆಗಳನ್ನು ಪಡೆದು ಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರು ಕೋವಿಡ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇವರುಗಳಿಗೆ ಮಾನವೀಯ ನೆಲಗಟ್ಟಿನಲ್ಲಿ ಪಂಚಾಯಿತಿ ಸಹಾಯ ಸೋಮವಾರಪೇಟೆ, ಜ. ೨೮: ಕೊರೊನಾ ಲಾಕ್‌ಡೌನ್ ಸಂದರ್ಭ ವ್ಯಾಪಾರ ವಟಿವಾಟು ಇಲ್ಲದೇ ಸಂಕಷ್ಟಕ್ಕೆ ಸಿಲುಕಿರುವ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಟೆಂಡರ್ ಪಡೆದಿರುವ ವರ್ತಕರ ಅವಧಿಯನ್ನು ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಕೋರಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಪ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ಪ.ಪಂ. ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಬಗ್ಗೆ ಚರ್ಚೆ ನಡೆಸಿದರು.ಪ.ಪಂ.ನ ವಾರ್ಷಿಕ ಟೆಂಡರ್ ಮೂಲಕ ಸಂತೆ ಸುಂಕ, ಸಂತೆ, ಅಂಗಡಿ ಮಳಿಗೆಗಳನ್ನು ಪಡೆದು ಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರು ಕೋವಿಡ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇವರುಗಳಿಗೆ ಮಾನವೀಯ ನೆಲಗಟ್ಟಿನಲ್ಲಿ ಪಂಚಾಯಿತಿ ಸಹಾಯ ಅವರ ಟೆಂಡರ್ ಅವಧಿಯನ್ನು ಮುಂದುವರೆಸಬೇಕೆAದು ಎಲ್ಲಾ ಸದಸ್ಯರು, ಮುಖ್ಯಾಧಿಕಾರಿಗಳನ್ನು ಒತ್ತಾಯಿಸಿದರು. ಅಲ್ಲದೆ ಈ ಬಗ್ಗೆ ಶಾಸಕರೂ ಕೂಡ ಪತ್ರ ಬರೆದಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಮಾತನಾಡಿದ ಮುಖ್ಯಾಧಿಕಾರಿ ನಾಚಪ್ಪ, ಟೆಂಡರ್ ಅವಧಿ ವಿಸ್ತರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಅಲ್ಲದೆ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ವಿಚಾರವನ್ನು ಜಿಲ್ಲಾಧಿಕಾರಿಗಳ
(ಮೊದಲ ಪುಟದಿಂದ) ಗಮನಕ್ಕೆ ತಂದು ಸರ್ಕಾರದ ಅನುಮತಿ ಪಡೆಯಬೇಕಾಗುತ್ತÀದೆ ಎಂದರು. ಈ ಬಗ್ಗೆ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಕಳುಹಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪಟ್ಟಣದ ವರ್ಕ್ಶಾಪ್ ಏರಿಯಾದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗಿದ್ದು, ಇದನ್ನು ತೆರವು ಗೊಳಿಸುವಂತೆ ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೆಲ ಸದಸ್ಯರು ಸಭೆಯಲ್ಲಿ ಹೇಳಿದರು.
ಅದು ಅನಧಿಕೃತ ಕಟ್ಟಡವಲ್ಲ. ಕಟ್ಟಡವನ್ನು ನವೀಕರಣಗೊಳಿಸಲಾಗಿದೆ. ಆದ್ದರಿಂದ ತೆರವುಗೊಳಿಸುವ ಅವಶ್ಯಕತೆಯಿಲ್ಲ. ಈ ಹಿಂದೆಯೇ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಅದೇ ಇನ್ನೂ ಕಾರ್ಯಗತಗೊಂಡಿಲ್ಲ. ಈ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಕೆಲವರು ಅಭಿಪ್ರಾಯಿಸಿದರು.
ಪಟ್ಟಣ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಬಿ. ಸಂಜೀವ, ಸದಸ್ಯರುಗಳಾದ ಜಯಂತಿ ಶಿವಕುಮಾರ್, ಶೀಲಾ ಡಿಸೋಜ, ವೆಂಕಟೇಶ್, ಪಿ.ಕೆ. ಚಂದ್ರು, ಬಿ.ಆರ್.ಮಹೇಶ್, ಜೀವನ್, ಉದಯಶಂಕರ್, ನಾಗರತ್ನ, ಶುಭಕರ, ನಾಮನಿರ್ದೇಶನ ಸದಸ್ಯರಾದ ಎಸ್.ಮಹೇಶ್, ಶರತ್‌ಚಂದ್ರ ಅವರುಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಅಭಿಯAತರ ಹೇಮಂತ್, ಆರೋಗ್ಯ ನಿರೀಕ್ಷಕ ಉದಯಕುಮಾರ್, ವಿಷಯ ಸಂಗ್ರಾಹಕಿ ರೂಪಾ, ಪ್ರಥಮದರ್ಜೆ ಸಹಾಯಕ ರಫೀಕ್, ಲೆಕ್ಕಾಧಿಕಾರಿ ಭಾವನಾ ಅವರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.