ಕೂಡಿಗೆ, ಜ. ೨೮: ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದ ಮಂಜುನಾಥ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ಮಂಜುನಾಥ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕರ್ನಾಟಕ ರಾಜ್ಯ ಕುರುಬ ಸಂಘದ ನಿರ್ದೇಶಕಿ ಹೇಮಲತಾ ಮಂಜುನಾಥ್, ಗೌರವಾಧ್ಯಕ್ಷ. ಸಿ.ಕೆ. ಉದಯ್ ಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್, ಭಾಗ್ಯ, ರವಿ, ಕೆ.ಆರ್. ಕುಮಾರ್, ತಾಲೂಕು ಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಪುನೀತ್ಕುಮಾರ್, ಮಲ್ಲೇಶ್, ಹರೀಶ್ ಭಾಗವಹಿಸಿದ್ದರು.