ಸೋಮವಾರಪೇಟೆ, ಜ. ೨೭: ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರಗತಿಯಲ್ಲಿರುವ ಸಿಂಥೆಟಿಕ್ ಟರ್ಫ್ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸಂಬAಧಿಸಿದ ಅಭಿಯಂತರರಿಗೆ ಸೂಚಿಸಿದರು.

ಕ್ರೀಡಾ ಇಲಾಖೆಯ ವತಿಯಿಂದ ರೂ. ೪.೧೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಟರ್ಫ್ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು, ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಎಲ್ಲೂ ಕೂಡ ಕಳಪೆಯಾಗಬಾರದು. ಈ ನಿಟ್ಟಿನಲ್ಲಿ ಅಭಿಯಂತರರು ಜಾಗೃತಿ ವಹಿಸಬೇಕು ಎಂದರು. ಕ್ರೀಡಾಂಗಣದ ಸುತ್ತಲೂ ಬೇಲಿ, ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ಉಳಿಕೆಯಾಗಿರುವ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ತಡೆಗೋಡೆ ನಿರ್ಮಾಣಕ್ಕೆ ಕ್ರೀಡಾ ಇಲಾಖೆಯ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆಯ ಅಭಿಯಂತರ ಹರೀಶ್ ಅವರಿಗೆ ನಿರ್ದೇಶಿಸಿದರು. ಈ ಸಂದರ್ಭ ಕ್ರೀಡಾಂಗಣ ಕಾಮಗಾರಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಭಿಮನ್ಯುಕುಮಾರ್ ಸೇರಿದಂತೆ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ, ಕಾಮಗಾರಿಯ ಬಗ್ಗೆ ಶಾಸಕರು ಮಾಹಿತಿ ಪಡೆದರು.