ಮಡಿಕೇರಿ, ಫೆ. ೫: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಾ. ೬ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇಂದು ಬೆಳಿಗ್ಗೆ ೧೧.೦೫ ಗಂಟೆಗೆ ಭಾರತದ ರಾಷ್ಟçಪತಿ ಅವರೊಂದಿಗೆ ಜಿಲ್ಲೆಯ ವಿವಿಧ ಕಾರ್ಯಕ್ರಮ, ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್. ರವಿಪ್ರಕಾಶ್ ತಿಳಿಸಿದ್ದಾರೆ.

* ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ತಾ. ೬ ರಂದು ಮಧ್ಯಾಹ್ನ ೧೨.೩೦ ಗಂಟೆಗೆ ಹೆಲಿಪ್ಯಾಡ್, ಮಧ್ಯಾಹ್ನ ೩.೧೦ ಗಂಟೆಗೆ ರಾಷ್ಟçಪತಿ ಅವರೊಂದಿಗೆ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಟಿ. ಯೋಗೇಶ ತಿಳಿಸಿದ್ದಾರೆ.