ಮಡಿಕೇರಿ, ಫೆ. ೫ : ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಟ್ಯಾಕ್ಸಿ ಚಾಲಕ ನೇಣಿಗೆ ಶರಣಾಗಿರುವ ಘಟನೆ ನಗರದ ಟಿ. ಜಾನ್ ಬಡಾವಣೆಯಲ್ಲಿ ನಡೆದಿದೆ.
ಮೂಲತಃ ಆಲೂರುಸಿದ್ದಾಪುರದ ಕಿರಣ್ ಕುಮಾರ್ (೩೩) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಕೆಲ ವರ್ಷಗಳಿಂದ ಮಡಿಕೇರಿಯಲ್ಲಿ ನೆಲೆಸಿದ್ದ ಚಾಲಕ ಕಿರಣ್ ೮ ವರ್ಷಗಳ ಹಿಂದೆ ಮದಲಾಪುರದ ಮಂಜುಶ್ರೀಯನ್ನು ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಕಿರಣ್‌ನೊಂದಿಗೆ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಮುನ್ನ ಕಿರಣ್ ಡೆತ್‌ನೋಟ್ ಬರೆದಿಟ್ಟು ತನ್ನ ಬಾಡಿಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.