ಮಡಿಕೇರಿ, ಫೆ. ೫: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾ. ೮ ರಂದು ಬೆಳಿಗ್ಗೆ ೧೧ ರಿಂದ ೧೨ ಗಂಟೆಯವರೆಗೆ ಕುಶಾಲನಗರ ನಾಡ ಕಚೇರಿ, ಮಧ್ಯಾಹ್ನ ೧ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ಸೋಮವಾರಪೇಟೆ ತಾಲೂಕು ಕಚೇರಿ, ಮಧ್ಯಾಹ್ನ ೩.೩೦ ರಿಂದ ೪.೩೦ ಗಂಟೆಯವರೆಗೆ ಶನಿವಾರಸಂತೆ ನಾಡಕಚೇರಿ, ತಾ. ೧೧ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ಸಿದ್ದಾಪುರ ಗ್ರಾಮ ಪಂಚಾಯಿತಿ ಕಟ್ಟಡ ಸಭಾಂಗಣದಲ್ಲಿ, ಮಧ್ಯಾಹ್ನ ೧೨.೩೦ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಟ್ಟಡ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ-೫೭೧೨೦೧, ದೂ.ಸಂ ೦೮೨೭೨-೨೨೨೧೦೦, ೯೪೮೦೮೦೬೨೮೧ ಮತ್ತು ೯೪೮೦೮೦೬೨೮೨ ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಠಾಣೆಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ