ನಾಪೋಕ್ಲು, ಫೆ. ೫: ಮಡಿಕೇರಿ ತಾಲೂಕು ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕರಾದ ನಾಪಂಡ ರ‍್ಯಾಲಿ ಮಾದಯ್ಯ ಬೆಟ್ಟಗೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿರುವ ಹಿನ್ನೆಲೆ ಮಡಿಕೇರಿ ಪಿಎಲ್‌ಡಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ,ಉಪಾಧ್ಯಕ್ಷ ರಮೇಶ್ ಮುದ್ದಯ್ಯ ಮತ್ತು ನಿರ್ದೇಶಕರು ಇದ್ದರು.