ಶನಿವಾರಸಂತೆ, ಫೆ. ೬: ಶನಿವಾರಸಂತೆ ಗ್ರಾಮ ಪಂಚಾಯಿತಿಗೆ ನೂತನವಾಗಿ ೧೦ ಮಂದಿ ಸದಸ್ಯರುಗಳು ಆಯ್ಕೆಯಾಗಿದ್ದು, ಗ್ರಾಮ ಪಂಚಾಯಿತಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ತಾ. ೧೨ ರಂದು ಅಪರಾಹ್ನ ೧ ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸದಸ್ಯರ ಸಭೆ ಕರೆಯಲಾಗಿ, ಅಧ್ಯಕ್ಷರು-ಉಪಾಧ್ಯಕ್ಷರ ಚುನಾವಣೆ ನಡೆಸಲು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ ಅವರನ್ನು ನೇಮಕ ಮಾಡಲಾಗಿದ್ದು, ಈಗಾಗಲೇ ೧೦ ಮಂದಿ ನೂತನ ಸದಸ್ಯರುಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ಅವರು ಚುನಾವಣಾ ನೋಟೀಸ್ ಜಾರಿ ಮಾಡಿದ್ದಾರೆ.